ಕೊಡಗು: ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈ 30 ರಂದು 115.6 ಮಿ.ಮೀನಿಂದ 204 ಮಿ.ಮೀಟರ್. ಹಾಗೆಯೇ, 31 ರಂದು 64.5 ಮಿ.ಮೀ ನಿಂದ 115 ಮಿ.ಮೀಟರ್ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಎರಡು ದಿನ ಯೆಲ್ಲೊ ಅಲರ್ಟ್ ಘೋಷಿಸಿದ್ದಾರೆ.
ಪ್ರಾಕೃತಿಕ ವಿಕೋಪಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಜಿಲ್ಲಾಡಳಿತ ನೀಡಿರುವ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಡಳಿತ ಮನವಿ ಮಾಡಿದೆ. ಅಲ್ಲದೇ ಜಿಲ್ಲೆಯ ಜನತೆ ಎಚ್ಚರದಿಂದ ಇರುವಂತೆ ಸೂಚಿಸಿದೆ.