ಕೊಡಗು: ಕಾಡುಕೋಣ ಬೇಟೆಯಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಅರಣ್ಯ ವಿಭಾಗದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಪುಲಿಯೇರಿ ಗ್ರಾಮದ ಯು.ಕೆ.ಸುಬ್ಬಯ್ಯ (45) ಹಾಗೂ ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಪುಲಿಯೇರಿ ಗ್ರಾಮದ ದೇವಯ್ಯರ ಕಾಡಿನಲ್ಲಿ ಆರೋಪಿಗಳು ಕಾಡುಕೋಣವನ್ನು ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.