ETV Bharat / state

ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿದೆಯೇ ಅಲ್ಟ್ರಾಸೌಂಡ್ ಸ್ಕ್ಯಾನ್ ದಂಧೆ? - ಅಲ್ಟ್ರಾಸೌಂಡ್ ಸ್ಕ್ಯಾನ್ ದಂಧೆ ಆರೋಪ

ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷಿನ್ ಇದ್ದರೂ ಕಳೆದ 4 ವರ್ಷಗಳಿಂದ ಸಿಬ್ಬಂದಿ ಇಲ್ಲ ಎಂಬ ನೆಪ ಹೇಳುತ್ತಿದ್ದಾರೆ. ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಸರ್ಕಾರಿ ಆಸ್ಪತ್ರೆಯನ್ನೇ ನಂಬಿ ಬರುತ್ತಿರುವ ರೋಗಿಗಳಿಗೆ ಇಲ್ಲಿನ ವೈದ್ಯರು ಸ್ಕ್ಯಾನಿಂಗ್ ಮಾಡಬೇಕಾದರೆ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಿ ಕಳುಹಿಸುತ್ತಿದ್ದಾರೆ. ಇದೆಲ್ಲವೂ ಯೋಜಿತವಾಗಿ ನಡೆಯುತ್ತಿರುವ ದಂಧೆ ಎನ್ನುವುದು ಜನರ ಆರೋಪ.

Kodagu District Hospital
ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನ್ ದಂಧೆ ಆರೋಪ
author img

By

Published : Jun 2, 2020, 11:48 PM IST

ಕೊಡಗು: ಜಿಲ್ಲಾ ಕೇಂದ್ರದಲ್ಲಿರುವ ಮೆಡಿಕಲ್ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷಿನ್ ಇದ್ದರೂ ಅದನ್ನು ಬಳಕೆ ಮಾಡಲು ಸಿಬ್ಬಂದಿಯೇ ಇಲ್ಲ. ಇದರಿಂದ ಸರ್ಕಾರಿ ಆಸ್ಪತ್ರೆ ನಂಬಿ ಬರುವ ಬಡ ರೋಗಿಗಳು, ಖಾಸಗಿ ಆಸ್ಪತ್ರೆಗೆ ಹೋಗಿ ಸಾವಿರಾರು ರೂಪಾಯಿ ತೆರಬೇಕಾಗಿದೆ. ಆದರೆ ಇದು ವ್ಯವಸ್ಥಿತವಾಗಿ ನಡೆಯುತ್ತಿರುವ ದಂದೆ ಎಂದು ಜನರು ಆರೋಪಿಸಿದ್ದಾರೆ.

ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನ್ ದಂಧೆ ಆರೋಪ
ಈ ಆಸ್ಪತ್ರೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ವಿಭಾಗಕ್ಕೆ ದಿನವೊಂದರಲ್ಲಿ ಚೆಕ್‍ ಅಪ್ ಮಾಡಿಸಿಕೊಳ್ಳಲು ಕನಿಷ್ಠ 100 ರಿಂದ 150 ಗರ್ಭಿಣಿಯರು ಬರುತ್ತಾರೆ. ಜೊತೆಗೆ ಉದರ ಸಂಬಂಧಿ ಕಾಯಿಲೆಗಳಿಂದ ಬಳಲುವ ಸಾಕಷ್ಟು ರೋಗಿಗಳು ಬರುತ್ತಾರೆ. ಆದರೆ ಇಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷಿನ್ ಇದ್ದರೂ ಕಳೆದ 4 ವರ್ಷಗಳಿಂದ ಸಿಬ್ಬಂದಿ ಇಲ್ಲ ಎಂಬ ನೆಪ ಹೇಳುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಸರ್ಕಾರಿ ಆಸ್ಪತ್ರೆಯನ್ನೇ ನಂಬಿ ಬರುತ್ತಿರುವ ರೋಗಿಗಳಿಗೆ ಸ್ಕ್ಯಾನಿಂಗ್ ಮಾಡಬೇಕಾದರೆ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಿ ಕಳುಹಿಸುತ್ತಿದ್ದಾರೆ. ಇದರಿಂದಾಗಿ ಬಡವರು ಸಾವಿರಾರು ರೂಪಾಯಿಯನ್ನು ಖರ್ಚು ಮಾಡಬೇಕಾಗಿದೆ. ಇಲ್ಲಿನ ವೈದ್ಯರು ಒಂದು ಸ್ಕ್ಯಾನಿಂಗ್​ಗೆ ಹೊರಗೆ ಕಳುಹಿಸಿದರೆ ಅದಕ್ಕಾಗಿ ಖಾಸಗಿ ಆಸ್ಪತ್ರೆಗಳಿಂದ ಹಣ ಪಡೆಯುತ್ತಿದ್ದಾರೆ. ಇದೆಲ್ಲವೂ ಯೋಜಿತವಾಗಿ ನಡೆಯುತ್ತಿರುವ ದಂಧೆ ಎನ್ನೋದು ಜನರ ಆರೋಪ. ಆಸ್ಪತ್ರೆಗೆ ಬೇಕಾಗಿರುವ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷಿನ್​ಗಳ ಖರೀದಿಗೆಂದು ಕಳೆದ ಬಾರಿ ಕೊಡಗು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸರ್ಕಾರ 50 ಲಕ್ಷ ಹಣ ಬಿಡುಗಡೆ ಮಾಡಿದೆ. ಆದರೆ ಇದುವರೆಗೆ ಟೆಂಡರ್ ಕರೆದಿಲ್ಲ. ಸಾರ್ವಜನಿಕರು ಪ್ರಶ್ನಿಸಿದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಟೆಂಡರ್ ಕರೆಯಲಾಗುವುದು ಎಂದು ನೋಟಿಸ್ ಮಾಡಲಾಗಿದೆ. ಇದನ್ನು ಸಾರ್ವಜನಿಕರು ಸ್ಥಾನೀಯ ವೈದ್ಯಾಧಿಕಾರಿಯನ್ನು ಪ್ರಶ್ನಿಸಿದರೆ ಕೇವಲ ಸಮಜಾಯಿಷಿ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತು ಕೊಡಗು ವೈದ್ಯಾಧಿಕಾರಿಯನ್ನ ಕೇಳಿದರೆ, ಇದು ನಮ್ಮ ಗಮನಕ್ಕೆ ಬಂದಿರಲಿಲ್ಲ. ಸಾರ್ವಜನಿಕರು ಪ್ರಶ್ನಿಸಿದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಗೊತ್ತಾಗಿದೆ. ಬಳಕೆಯಾಗದೆ ಇರುವ ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷಿನ್ ಅನ್ನು ತಕ್ಷಣದಲ್ಲೇ ಸ್ಥಳಾಂತರಿಸಲಾಗುವುದು ಬಳಿಕ ಇಲ್ಲಿಗೆ ಹೊಸ ಮಷಿನ್ ಖರೀದಿಸಲಾಗುವುದು. ಅದಕ್ಕೆ ಇನ್ನೂ ಮೂರು ತಿಂಗಳು ಸಮಯವಕಾಶಬೇಕು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.