ಕೊಡಗು: ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಪಿರಿಯಾಪಟ್ಟಣ ಮೂಲದ 22 ವರ್ಷ ವಯಸ್ಸಿನ ಸಿದ್ದರಾಜು ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಈತ ಕಳೆದ ನಾಲ್ಕು ತಿಂಗಳಿನಿಂದ ವಿಚಾರಣಾಧೀನ ಕೈದಿಯಾಗಿ ಮಡಿಕೇರಿ ಜೈಲಿನಲ್ಲಿದ್ದ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ದೊರೆತಿದೆ.
ಹುಣಸೂರು ಹಾಗೂ ಮಡಿಕೇರಿ ವ್ಯಾಪ್ತಿಯಲ್ಲಿ ನಡೆದ ಕೆಲವು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಈತನನ್ನು ಬಂಧಿಸಿದ್ದರು.