ಕೊಡಗು: ರಾಮ ಮಂದಿರ ನಿರ್ಮಾಣದ ಕನಸು ಈಡೇರಿದೆ. ಪ್ರಪಂಚದಲ್ಲಿರುವ ಭಕ್ತರು ಮಂದಿರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ.
ಮಡಿಕೇರಿಯಲ್ಲಿ ನಿರ್ಮಾಣವಾಗುತ್ತಿರುವ ಬ್ರಾಹ್ಮಣ ವಿದ್ಯಾ ಅಭಿವೃದ್ಧಿ ಸಂಘದ ಕಟ್ಟಡ ಕಾಮಗಾರಿ ಉದ್ಘಾಟಿಸಿ, ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಪ್ರಪಂಚದಲ್ಲಿರುವ ಭಕ್ತಾಧಿಗಳು ಮಂದಿರ ನಿರ್ಮಾಣಕ್ಕೆ ಕೈ ಜೋಡಿಸಬೇಕು. ಈಗಾಗಲೇ ನಿರ್ಮಾಣ ಕಾರ್ಯ ಆರಂಭಿಸುವ ನಿಟ್ಟಿನಲ್ಲಿ ಕೆಲಸಗಳು ಆರಂಭಗೊಂಡಿದೆ. ಆದ್ದರಿಂದ ಹಿಂದುಗಳು ಆರ್ಥಿಕವಾಗಿ ಮಂದಿರ ನಿರ್ಮಾಣಕ್ಕೆ ನೆರವು ನೀಡಬೇಕು ಎಂದರು.
ಇದೇ ವೇಳೆ ಗೋಹತ್ಯೆ ನಿಷೇಧಕ್ಕೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮ ಸ್ವಾಗತಾರ್ಹ ಎಂದು ಸ್ವಾಮೀಜಿ ಸಮರ್ಥಿಸಿಕೊಂಡರು.