ಕೊಡಗು : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವನ್ಯ ಮೃಗಗಳು ನಾಯಿ ಮತ್ತು ಎಮ್ಮೆಯ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಜಿಲ್ಲೆಯ ಪೊನ್ನಂಪೇಟೆ ಮತ್ತು ಮಡಿಕೇರಿ ತಾಲೂಕುಗಳಲ್ಲಿ ನಡೆದಿವೆ.
ಪೊನ್ನಂಪೇಟೆ ತಾಲೂಕಿನ ಅತ್ತೂರು ಗ್ರಾಮದಲ್ಲಿ ನಾಯಿಯ ಮೇಲೆ ದಾಳಿ ನಡೆಸಿರುವ ವನ್ಯಮೃಗ, ತಲೆ ಭಾಗವನ್ನು ತಿಂದು ಹಾಕಿದೆ. ಚಿರತೆ ದಾಳಿ ನಡೆಸಿದ ನಾಯಿಯನ್ನು ಕೊಂದು ಹಾಕಿರುವುದಾಗಿ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದು. ಅದನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಓದಿ : ಮಂಡ್ಯ: ರೈಲ್ವೆ ಹಳಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಮಡಿಕೇರಿ ತಾಲೂಕಿನ ಹಮ್ಮಿಯಾಲ ಗ್ರಾಮದಲ್ಲಿ ಕೂಡ ಎಮ್ಮೆಯ ಮೇಲೆ ದಾಳಿ ನಡೆಸಿದ ವನ್ಯ ಪ್ರಾಣಿ ಕೊಂದು ಹಾಕಿದೆ. ಎಮ್ಮೆಯ ಮೇಲೆ ಹುಲಿ ದಾಳಿ ನಡೆಸಿರುವುದಾಗಿ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.