ಕೊಡಗು: ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಿದ್ದು, ರಾತ್ರಿಯಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ.
ಓದಿ:ಕೊಡಗು ಜಿಲ್ಲೆಯಲ್ಲಿ ದಿಢೀರನೆ ಜೋರು ಗಾಳಿ-ಮಳೆ.. ಮಂಜಿನಿಂದ ಕೂಡಿದ ಈ ದೃಶ್ಯ ಮನಮೋಹಕ..
ರಾತ್ರಿಯಿಡೀ ಬಿಡುವು ಕೊಟ್ಟು ಸುರಿಯುತ್ತಿರುವ ಗಾಳಿ-ಮಳೆಗೆ ಕೊಡಗು ಅಕ್ಷರಶಃ ಮಂಜುಗಡ್ಡೆಯಂತಾಗಿದೆ. ಮಳೆ ಹಿನ್ನೆಲೆಯಲ್ಲಿ ಕಾವೇರಿಯಲ್ಲೂ ನೀರಿನ ಹರಿವು ಹೆಚ್ಚಿದೆ. ಅಲ್ಲದೆ ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿಗೂ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಹಾಗೆಯೇ, ಕೃಷಿ ಚಟುವಟಿಕೆಗಳು ಗರಿಗೆದರಿದ್ದು ರೈತರಲ್ಲೂ ಉತ್ಸಾಹ ಮೂಡಿಸಿದೆ.