ಕೊಡಗು: ಮಹಿಳಾ ಅರಣ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನಡೆದ ಘಟನೆ. ಮಂಡ್ಯ ಮೂಲದ ರಶ್ಮಿ(27) ಮೃತ ಅಧಿಕಾರಿ.
ಇವರು ಅರಣ್ಯ ಇಲಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ(ಡಿಆರ್ಎಫ್ಒ) ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಕೊಡಗು ಜಿಲ್ಲೆ ಮಡಿಕೇರಿಯ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು
ತಾಯಿಯ ಸಮಾಧಿ ಬಳಿ ಆತ್ಮಹತ್ಯೆ ಮಾಡಿಕೊಂಡ ಮಗ( ಕೋಲಾರ): ಯುವಕನೊಬ್ಬ ತನ್ನ ತಾಯಿ ಸಮಾಧಿ ಬಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್ನಲ್ಲಿ ಇತ್ತೀಚೆಗೆ ನಡೆದಿತ್ತು. ತಾಡಿಗೋಳ್ ಗ್ರಾಮದ ಪ್ರವೀಣ್ (22) ಆತ್ಮಹತ್ಯೆಗೆ ಶರಣಾದ ಯುವಕ.
ಈತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ಸಂಬಂಧಿಕರ ಮದುವೆಗೆ ಎಂದು ಗ್ರಾಮಕ್ಕೆ ಬಂದಿದ್ದ. ತಾಯಿಯನ್ನು ಕಳೆದುಕೊಂಡಿರುವ ಯುವಕ ತನ್ನ ತಾಯಿ ಸಮಾಧಿ ಇರುವಂತಹ ಸ್ಥಳದಲ್ಲಿಯೇ ಸಾವಿಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಸ್ಥಳಕ್ಕೆ ಶ್ರೀನಿವಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದಿನಗೂಲಿ ನೌಕರ ಆತ್ಮಹತ್ಯೆ(ಶಿವಮೊಗ್ಗ): ಶಿವಮೊಗ್ಗದ ಚಂದ್ರಗುತ್ತಿ ದೇವಾಲಯದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಇತ್ಥೀಚೆಗೆ ನಡೆದಿತ್ತು. ಗಣಪತಿ ತಾವರೆಹಳ್ಳಿ(40) ಆತ್ಮಹತ್ಯೆ ಮಾಡಿಕೊಂಡ ದಿನಗೂಲಿ ನೌಕರ. ಗಣಪತಿ ಅವರು ರಾಜ್ಯದ ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಚಂದ್ರಗುತ್ತಿಯ ರೇಣುಕಾಂಬ ದೇವಾಲಯದಲ್ಲಿ ಹಲವಾರು ವರ್ಷಗಳಿಂದ ದಿನಗೂಲಿ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದರು.
ಗಣಪತಿ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಅವರು ಸಾಕಷ್ಟು ಮಾನಸಿಕವಾಗಿ ನೊಂದಿದ್ದರು. ತಮ್ಮ ಅನಾರೋಗ್ಯದ ಬಗ್ಗೆ ಸಾಕಷ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೂ ಸಹ ಆರೋಗ್ಯ ಸರಿ ಆಗಿರಲಿಲ್ಲ. ಇದರಿಂದ ಸಾಕಷ್ಟು ಬೇಸರಗೊಂಡಿದ್ದರು. ಇತ್ತೀಚೆಗೆ ಕೆಲಸಕ್ಕೂ ಸರಿಯಾಗಿ ಹೋಗುತ್ತಿರಲಿಲ್ಲ. ಇನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಾವಿಗೆ ಶರಣಾಗಿದ್ದರು. ಕುಟಂಬಸ್ಥರು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಕೋಲಾರ: ತಾಯಿಯ ಸಮಾಧಿ ಬಳಿ ಆತ್ಮಹತ್ಯೆ ಮಾಡಿಕೊಂಡ ಮಗ