ಮಡಿಕೇರಿ(ಕೊಡಗು): ಕ್ಷುಲ್ಲಕ ಕಾರಣಕ್ಕೆ ಮಹಿಳೆಯನ್ನು ವ್ಯಕ್ತಿವೋರ್ವ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಜೋಡುಪಾಲದಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಹೊನ್ನಮ್ಮ (55) ಕೊಲೆಯಾದ ಮಹಿಳೆ. ಇದೇ ಗ್ರಾಮದ ಆನಂದ (45) ಎಂಬಾತ ಚೂರಿಯಿಂದ ಇರಿದು ಹೊನ್ನಮ್ಮಳನ್ನು ಬರ್ಬರವಾಗಿ ಕೊಲೆ ಮಾಡಿರುವ ಆರೋಪಿ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.