ಕೊಡಗು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ಬೀಸುತ್ತಿದ್ದು, ಜಿಲ್ಲೆ ಸೇರಿದಂತೆ ಪರಿಣಾಮ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ 2 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಯೆಲ್ಲೋ ಅಲರ್ಟ್ ಘೋಷಿಸಿದೆ.

64.5 ಮಿಲಿ ಮೀಟರ್‌ನಿಂದ 115.5 ಮಿಲಿ ಮೀಟರ್ ಪ್ರಮಾಣದಷ್ಟು ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹಾಗೆಯೇ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಎದುರಾದರೆ ಜನತೆ ಜಿಲ್ಲಾಡಳಿತ ನೀಡಿರುವ 08272-221077 ತುರ್ತು ದೂರವಾಣಿ ಸಂಖ್ಯೆಗೆ ಕರೆ ಮಾಡುವಂತೆ ಹಾಗೂ ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.