ಕೊಡಗು: ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕೇರಳಾ-ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವುದರಿಂದ ಕೇಂದ್ರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಜಿಲ್ಲೆಯಲ್ಲಿ ಅಕ್ಟೋಬರ್ 17 ಮತ್ತು 19 ರವರೆಗೆ 115 ಮಿ.ಮೀವರೆಗೆ ಭಾರೀ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರದಿಂದ ಇರಲು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಸೂಚನೆ ನೀಡಿದ್ದಾರೆ. ಅಲ್ಲದೆ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಎದುರಾದರೆ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಮನವಿ ಮಾಡಿದ್ದಾರೆ.