ಕೊಡಗು: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕೂಡಿಗೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ವಿರಾಜಪೇಟೆ ತಾಲೂಕಿನ ಹುದಿಕೇರಿ ಗ್ರಾಮದ ನಿವಾಸಿ ಸಂಜು(22) ಮೃತ ಯುವಕ. ಕೂಡಮಂಗಳೂರು ಹೋಟೆಲ್ವೊಂದಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮೃತದೇಹ ಮುಂಜಾನೆ ಹೋಟೆಲ್ ಹಿಂಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.