ಕೋಲಾರ: ಗಣಪತಿ ನಿಮಜ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ 6 ಶಾಲಾಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಕಲ್ಯಾಣ ನಿಧಿಯಿಂದ ₹ 50 ಸಾವಿರ ಪರಿಹಾರ ಧನವನ್ನು ಸರ್ಕಾರ ಪ್ರಕಟಿಸಿದೆ.
ಕೆಜಿಎಫ್ನ ಕ್ಯಾಸಂಬಳ್ಳಿ ಹೋಬಳಿಯ ಮರಡ ಘಟ್ಟ ಗ್ರಾಮದ ಕೆರೆಯಲ್ಲಿ ಗಣಪತಿ ನಿಮಜ್ಜನೆ ಮಾಡುವಾಗ ನೀರಿನಲ್ಲಿ ಮುಳುಗಿ ಈ ಅನಾಹುತ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿ ಮಗುವಿನ ಕುಟುಂಬಕ್ಕೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೋಲಾರ ಜಿಲ್ಲಾಧಿಕಾರಿಗಳಿಗೆ ಸಿಎಂ ಆದೇಶ ಹೊರಡಿಸಿದ್ದಾರೆ.
![6 students died at lake](https://etvbharatimages.akamaized.net/etvbharat/prod-images/kn-bng-08-cm-announcement-script-9021933_10092019204615_1009f_1568128575_43.jpg)
ಮುಖ್ಯಮಂತ್ರಿ ಸೂಚನೆ ಮೇರೆಗೆಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆಯಿಂದ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.