ಕೋಲಾರ: ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ ನಗರದ ಕ್ಲಾಕ್ ಟವರ್ ಬಳಿ ಜರುಗಿದೆ.
ಕ್ಲಾಕ್ ಟವರ್ನಿಂದ ಮಹಾಲಕ್ಷ್ಮಿ ಬಡಾವಣೆಗೆ ಹೋಗುವ ರಸ್ತೆಯಲ್ಲಿ ಮೂವರು ಯುವಕರು ಮಾಸ್ಕ್ ಧರಿಸದೆ ಒಂದೇ ಬೈಕ್ನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಅವರನ್ನು ತಡೆದ ಕಾನ್ಸ್‌ಟೇಬಲ್ ವೆಂಕಟರಮಣಪ್ಪ, ಮಾಸ್ಕ್ ಹಾಕದಿರುವುದನ್ನು ಪ್ರಶ್ನಿಸಿದ್ದಾರೆ. ಇದೇ ವಿಚಾರಕ್ಕೆ ಯುವಕರು ಹಾಗು ಕಾನ್ಸ್‌ಟೇಬಲ್ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಯುವಕರು ಮತ್ತು ಅವರ ಕಡೆಯವರು ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವೆಂಕಟರಮಣಪ್ಪ ಅವರನ್ನು ಚಿಕಿತ್ಸೆಗಾಗಿ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ ಓರ್ವನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಜನತಾ ಲಾಕ್ಡೌನ್ ಫೇಲ್, ಸಂಪೂರ್ಣ ಲಾಕ್ಡೌನ್ ಬಗ್ಗೆ ಸುಧಾಕರ್ ಸುಳಿವು