ETV Bharat / state

ಸ್ವ್ಯಾಬ್ ಕಲೆಕ್ಟ್ ಮಾಡುತ್ತಿದ್ದ ಸಿಬ್ಬಂದಿ ಮೇಲೆ ವ್ಯಕ್ತಿಯಿಂದ ಹಲ್ಲೆ - SNR District Hospital

ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವ ಸಲುವಾಗಿ ಜಿಲ್ಲಾಸ್ಪತ್ರೆಯ ಕೋವಿಡ್ ಪರೀಕ್ಷಾ ಕೇಂದ್ರದ ಮುಂದೆ ಜನರು ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಶ್ರೀರಾಮ್ ಎಂಬ ವ್ಯಕ್ತಿ ಸಾಲಿನಲ್ಲಿ ನಿಲ್ಲದೆ, ಏಕಾಏಕಿ ಕೋವಿಡ್ ಪರೀಕ್ಷಾ ಕೇಂದ್ರದ ಒಳನುಗ್ಗಿದ್ದಾನೆ..

SNR District Hospital
ಸ್ವ್ಯಾಬ್ ಕಲೆಕ್ಟ್ ಮಾಡುತ್ತಿದ್ದ ಸಿಬ್ಬಂದಿ ಮೇಲೆ ವ್ಯಕ್ತಿಯಿಂದ ಹಲ್ಲೆ
author img

By

Published : Apr 26, 2021, 12:46 PM IST

Updated : Apr 26, 2021, 12:55 PM IST

ಕೋಲಾರ : ನಗರದ ಎಸ್​​ಎನ್​ಆರ್ ಜಿಲ್ಲಾಸ್ಪತ್ರೆ ಆವರಣದಲ್ಲಿ ಸ್ವ್ಯಾಬ್ ಕಲೆಕ್ಟ್ ಮಾಡುತ್ತಿದ್ದ ಸಿಬ್ಬಂದಿ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಸ್ವ್ಯಾಬ್ ಕಲೆಕ್ಟ್ ಮಾಡುತ್ತಿದ್ದ ಸಿಬ್ಬಂದಿ ಮೇಲೆ ವ್ಯಕ್ತಿಯಿಂದ ಹಲ್ಲೆ

ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವ ಸಲುವಾಗಿ ಜಿಲ್ಲಾಸ್ಪತ್ರೆಯ ಕೋವಿಡ್ ಪರೀಕ್ಷಾ ಕೇಂದ್ರದ ಮುಂದೆ ಜನರು ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಶ್ರೀರಾಮ್ ಎಂಬ ವ್ಯಕ್ತಿ ಸಾಲಿನಲ್ಲಿ ನಿಲ್ಲದೆ, ಏಕಾಏಕಿ ಕೋವಿಡ್ ಪರೀಕ್ಷಾ ಕೇಂದ್ರದ ಒಳನುಗ್ಗಿದ್ದಾನೆ.

ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಸ್ವ್ಯಾಬ್ ಕಲೆಕ್ಟ್ ಮಾಡುತ್ತಿದ್ದ ರಾಘವೇಂದ್ರ ಎಂಬ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಕೂಡಲೇ ಸ್ಥಳಕ್ಕೆ ನಗರ ಠಾಣಾ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಶ್ರೀರಾಮ್ ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದು, ಸಾಲಿನಲ್ಲಿ ನಿಲ್ಲಲಾಗದೇ ಏಕಾಏಕಿ ಕೋವಿಡ್ ಪರೀಕ್ಷಾ ಕೇಂದ್ರಕ್ಕೆ ನುಗ್ಗಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾವು-ಬದುಕಿನ ಮಧ್ಯೆ ಹೋರಾಟ : BU ನಂಬರ್ ಇಲ್ಲದೇ ಮನೆಯಲ್ಲೇ ಚಿಕಿತ್ಸೆ

Last Updated : Apr 26, 2021, 12:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.