ಕೋಲಾರ: ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕರ ನಿವಾಸಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಹಲವು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕ ನಾರಾಯಣಸ್ವಾಮಿ ಅವರಿಗೆ ಸೇರಿದ, ಬೆಂಗಳೂರು, ಕೋಲಾರ, ಹಾಗೂ ಚಿಂತಾಮಣಿಯಲ್ಲಿನ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ನಗರದ ಅಂತರಗಂಗೆ ರಸ್ತೆಯ ನಾರಾಯಣಸ್ವಾಮಿ ಅವರ ಮಾವ ಶಿವಪ್ಪ ನಿವಾಸ ಸೇರಿದಂತೆ ಬೆಂಗಳೂರಿನ ಜಯನಗರದ ನಿವಾಸ ಮತ್ತು ಚಿಂತಾಮಣಿ ತಾಲೂಕಿನ ಮಾದರಕಲ್ಲು ಸ್ವಗ್ರಾಮದ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಎಸಿಪಿ ಡಿವೈಎಸ್ಪಿ ವೆಂಕಟೇಶ್ ನಾಯ್ಡು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತೊಡಗಿದ್ದಾರೆ.