ETV Bharat / state

ಕೋಲಾರ: ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ತಾಲೂಕು ಕಚೇರಿ ಮುಂಭಾಗ ಕಂದಾಯ ನಿರೀಕ್ಷಕನೊಬ್ಬ ರೈತನಿಂದ ಲಂಚ‌ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Revenue officer
Revenue officer
author img

By

Published : Dec 18, 2020, 5:40 PM IST

ಕೋಲಾರ: ರೈತನಿಂದ ಲಂಚ‌ ಪಡೆಯುತ್ತಿದ್ದ ಕಂದಾಯ ನಿರೀಕ್ಷಕನೋರ್ವ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಾಲೂರು ಪಟ್ಟಣದ ತಾಲೂಕು ಕಚೇರಿ ಮುಂಭಾಗ ಕಂದಾಯ ನಿರೀಕ್ಷಕ ಸುಬ್ರಮಣಿ ಎಂಬುವರು ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಲೂರು ತಾಲೂಕಿನ ಮಾರಸಂದ್ರ ಗ್ರಾಮದ ರೈತ ನಾರಾಯಣ ಮೂರ್ತಿ ಎಂಬುವರ ಬಳಿ ಜಮೀನಿನ ಪಹಣಿ ತಿದ್ದುಪಡಿ ಮಾಡುವುದರ ಸಲುವಾಗಿ ಸುಮಾರು ಎರಡು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರಂತೆ. ಈ ಹಿನ್ನೆಲೆ ಇಂದು ನಾರಾಯಣ ಮೂರ್ತಿ ಹತ್ತು ಸಾವಿರ ರೂ. ಲಂಚ ನೀಡಲು ಬಂದಿದ್ದರು. ಈ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಸಿಬಿ ಡಿವೈಎಸ್​ಪಿ ಪುರುಷೋತ್ತಮ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.