ಕೋಲಾರ: ಕೋವಿಡ್ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂದು ಡಿಸಿಎಂಗೆ ದೂರು ನೀಡಿದ ಯೋಧನ ಮೇಲೆ ಆಸ್ಪತ್ರೆಯ ಸಿಬ್ಬಂದಿ ಹಲ್ಲೆ ನಡೆಸಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಡಿಸಿಎಂ ಅಶ್ವತ್ಥ್ ನಾರಾಯಣ್ ಅವರು, ಇಂದು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಕೋವಿಡ್ ನಿಯಂತ್ರಣ ವ್ಯವಸ್ಥೆಯ ಪರಿಶೀಲನೆಗೆ ಆಗಮಿಸಿದ್ದ ವೇಳೆ, ಯೋಧ ಶ್ರೀನಿವಾಸ್ ಎಂಬಾತ ಕೋವಿಡ್ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂದು ದೂರು ನೀಡಿದ್ರು. ಇದರಿಂದ ಕೆರಳಿದ ಆಸ್ಪತ್ರೆಯ ಸಿಬ್ಬಂದಿ ಚಿನ್ನಿ ಹಾಗೂ ಸಹಚರರು ಯೋಧನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ತನ್ನ ತಾಯಿಯನ್ನು ಕೊರೊನಾ ಚಿಕಿತ್ಸೆಗೆ ದಾಖಲಿಸಿದ್ದ ಶ್ರೀನಿವಾಸ್, ನೀರು ಕುಡಿಸುವ ಸಲುವಾಗಿ ಪಿಪಿಯಿ ಕಿಟ್ ಧರಿಸಿ ಕೋವಿಡ್ ಕೇಂದ್ರದೊಳಗೆ ಹೋಗಿದ್ದಾರೆ. ಆಗ ತಾಯಿ ಬೆಡ್ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು. ಇದನ್ನು ಗಮನಿಸಿ ಸಿಬ್ಬಂದಿ ಜೊತೆ ಏರು ಧ್ಬನಿಯಲ್ಲಿ ಮಾತನಾಡಿದ ಪರಿಣಾಮ ಮಾತಿನ ಚಕಮಕಿ ನಡೆದಿದೆ. ಇದಾದ ನಂತರ ಆಸ್ಪತ್ರೆಗೆ ಭೇಟಿ ನೀಡಿದ ಡಿಸಿಎಂಗೆ ದೂರು ನೀಡಿದ್ದಾರೆ.
ಓದಿ: ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ನಿರ್ಧಾರ: ಸಚಿವ ಸುಧಾಕರ್