ಕೋಲಾರ: ವಿಜಯದಶಮಿ ಅಂಗವಾಗಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಕೋಲಾರದ ಹೊಸ ಬಸ್ ನಿಲ್ದಾಣದ ಬಳಿ ಹಾಕಿದ ಕಸವನ್ನು ಸಂಸದ ಎಸ್.ಮುನಿಸ್ವಾಮಿಯವರೇ ಸ್ವತಃ ತೆರವುಗೊಳಿಸಿ ಜನರ ಮೆಚ್ಚುಗೆಗೆ ಪಾತ್ರರಾದರು. ನಗರದ ಪ್ರಮುಖ ಬೀದಿಗಳಲ್ಲಿ ಬಿದ್ದಿದ ಕಸವನ್ನು ತೆರವುಗೊಳಿಸಿದರು. ಸ್ವಚ್ಛತಾ ಕಾರ್ಯದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ರು.