ETV Bharat / state

ಕೋಲಾರದಲ್ಲಿ ಕರುವಿನ ಮೇಲೆ ಅತ್ಯಾಚಾರ: ಆರೋಪಿ ಬಂಧಿಸಿದ ಪೊಲೀಸರು - ಕೋಲಾರದಲ್ಲಿ ಕರುವಿನ ಮೇಲೆ ಅತ್ಯಾಚಾರ

ಹಸುವಿನ ಕರು ಮೇಲೆ ಅತ್ಯಾಚಾರ - ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ಘಟನೆ - ಪೊಲೀಸರಿಂದ ಆರೋಪಿ ಬಂಧನ.

Abnormal intercourse with a cow calf
ಕರುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ: ಆರೋಪಿಯನ್ನು ಬಂಧಿಸಿದ ಪೊಲೀಸರು
author img

By

Published : Jan 11, 2023, 7:02 PM IST

ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ಮಾಡಿದ ವಿಲಕ್ಷಣ ಘಟನೆ ನಡೆದಿದೆ. ಈ ಸಂಬಂಧ ವ್ಯಕ್ತಿಯೊರ್ವ ಪೊಲೀಸರ ಅತಿಥಿಯಾಗಿರುವ ಘಟನೆ ಕೋಲಾರದಿಂದ ವರದಿಯಾಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ಹಸುವಿನ ಕರುವಿನ ಮೇಲೆ 50 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ.

ಈ ಹಿಂದೆಯೂ ಈ ಆರೋಪಿ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದ ಎನ್ನಲಾಗಿದೆ. ಆಗ ಗ್ರಾಮಸ್ಥರೇ ಬುದ್ದಿ ಹೇಳಿ ಸುಮ್ಮನಾಗಿದ್ದರು. ಆದರೆ, ಮತ್ತೆ ಹಳೆ ಚಾಳಿ ಮುಂದುವರೆಸಿರುವ ಆರೋಪಿ ಇಂದು ಸಹ ಆಕಳು ಕರುವಿನ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಕರು ಸಾವನ್ನಪ್ಪಿದೆ, ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿದ್ದಾರೆ. ಸದ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಬೇತಮಂಗಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿಗೆ ನಡೆದಿತ್ತು ಇದೇ ರೀತಿಯ ಘಟನೆ: ಇತ್ತೀಚಿಗೆ ಕಾಮುಕನೊಬ್ಬ ಹಸುವಿನ ಕರು ಕಟ್ಟಿ ಹಾಕಿ ಅತ್ಯಾಚಾರ ಮಾಡಿರುವ ವಿಚಿತ್ರ ಘಟನೆ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿತ್ತು. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕಸಬಾ ಲಿಂಗಸೂಗೂರು ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿತ್ತು. 25 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದ. ಸ್ಥಳೀಯರೊಬ್ಬರಿಗೆ ಸೇರಿದ ಆಕಳು ಕರುವಿನ ಮೇಲೆ ಪೈಶಾಚಿಕ ಕೃತ್ಯ ನಡೆಸಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಮಾಲೀಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನೆ ಬಗ್ಗೆ ಪೊಲಿಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಇದನ್ನು ಓದಿ: ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪ.. ದಂಪತಿ ವಿರುದ್ಧ ದೂರು

ಬಾಲಕನಿಂದ ನಡೆದಿತ್ತು ಹಸುವಿನ ಮೇಲೆ ಅತ್ಯಾಚಾರ : ಇಂತಹುದ್ದೇ ಮತ್ತೊಂದು ಪ್ರಕರಣ ಸಹ ಇತ್ತೀಚಿಗಷ್ಟೇ ಮಹಾರಾಷ್ಟ್ರದಿಂದ ವರದಿಯಾಗಿತ್ತು. 16 ವರ್ಷದ ಬಾಲಕ ಹಸುವಿನ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದ, ಬಾಲಕನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಫರ್ಸುಂಗಿ ಗ್ರಾಮದ ಬಾಲಕ ಬಯಲಿನಲ್ಲಿ ಹಸುವಿನ ಕಾಲುಗಳನ್ನು ಕಟ್ಟಿಹಾಕಿ ಹಸುವಿನ ಜೊತೆ ಅಸಹಜ ಕ್ರಿಯೆ ನಡೆಸುತ್ತಿದ್ದ ಎಂದು ಅಲ್ಲಿನ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಪ್ರತ್ಯಕ್ಷದರ್ಶಿಗಳು ನೀಡಿದ್ದ ದೂರಿನ ಮೇಲೆ ಪೊಲೀಸರು ಬಾಲಕನ ವಿರುದ್ಧ ಅತ್ಯಾಚಾರ ಪ್ರಕರಣ ಮತ್ತು ಪ್ರಾಣಿ ಹಿಂಸೆ ಪ್ರಕರಣ ದಾಖಲಿಸಿಕೊಂಡು 16 ವರ್ಷದ ಆರೋಪಿಯನ್ನು ಬಂಧಿಸಿದ್ದರು. ಈ ಘಟನೆಯಿಂದ ಅಲ್ಲಿನ ಜನ ಬೇಸ್ತು ಬಿದ್ದಿದ್ದರು. ಅಲ್ಲದೇ ಬಾಲಕನಿಗೆ ಹಿಡಿ ಶಾಪ ಕೂಡಾ ಹಾಕಿದ್ದರು.
ಇದನ್ನು ಓದಿ: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ.. ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

ಬಿಹಾರದಲ್ಲೂ ಯುವಕನೋರ್ವ ಆರು ತಿಂಗಳ ಕರುವಿನ ಮೇಲೆ ಅತ್ಯಾಚಾರವೆಸಗಿದ್ದ ಘಟನೆ ನಡೆದಿತ್ತು. ಮಾಲೀಕ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಇದನ್ನೂ ಓದಿ:ವಿವಾಹಿತೆಯನ್ನು ಕಿಡ್ನ್ಯಾಪ್ ಮಾಡಿ ರೇಪ್; ಚಂದ್ರಗಿರಿಯಲ್ಲಿ ಬೆಚ್ಚಿಬೀಳಿಸುವ ಘಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.