ಕೋಲಾರ: ಕ್ಷುಲ್ಲಕ ಕಾರಣಕ್ಕೆ ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಗ್ರಾಮದ ಮುನಿಯಪ್ಪ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಅದೇ ಗ್ರಾಮದ ಶ್ರೀಕಾಂತ್, ಮೂರ್ತಿ, ನವೀನ್ ಎಂಬುವರು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆ ಮಾಡಿದ ಪರಿಣಾಮ ವೃದ್ಧನ ತಲೆಗೆ ಗಂಭೀರ ಗಾಯವಾಗಿದೆ.
ಗಾಯಗೊಂಡ ವೃದ್ಧನನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆಗೊಳಗಾದ ವೃದ್ಧನ ಸಂಬಂಧಿಕರು ದೂರು ನೀಡಿದ್ರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.