ಕೋಲಾರ: ಚುನಾವಣೆಗೆ ಅಕ್ರಮವಾಗಿ ಹಣ ಸಂಗ್ರಹಿಸಿದ ಆರೋಪದ ಮೇಲೆ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಲಾಗಿದೆ.
ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹಾಗೂ ಎಸ್ಪಿ ರೋಹಿಣಿ ಕಠೋಚ್ ದಾಳಿ ನಡೆಸಿದ್ದು, ಮನೆ ಬೀಗ ಒಡೆದು ಒಳಹೋಗಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ತಪಾಸಣೆ ವೇಳೆ ಮನೆಯಲ್ಲಿ 2.5 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ ಎನ್ನಲಾಗಿದೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.