ಕೋಲಾರ : ನಗರದಲ್ಲಿರುವ ಬೆಂಗಳೂರು ಉತ್ತರ ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ.ಬಿ ಆರ್ ಶ್ರೀನಿವಾಸ್ (56) ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಗರದಲ್ಲಿರುವ ಬೆಂಗಳೂರು ಉತ್ತರ ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ.ಬಿ ಆರ್ ಶ್ರೀನಿವಾಸ್ ಅವರು, ಕಳೆದ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಶ್ರೀನಿವಾಸ್ ಅವರ ಮೃತ ದೇಹವನ್ನು ಬೆಂಗಳೂರಿನ ಜ್ಞಾನ ಭಾರತಿ ಮನೆಯಲ್ಲಿ ಸಾರ್ವಜನಿಕರ ಪ್ರದರ್ಶನಕ್ಕೆ ಇರಿಸಲು ಕುಟುಂಬಸ್ಥರು ತಿರ್ಮಾನಿಸಿದ್ದಾರೆ. ಇವರು ಕಳೆದ ನಾಲ್ಕು ತಿಂಗಳಿಂದ ಕೋಲಾರ ಉತ್ತರ ವಿವಿಯಲ್ಲಿ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.