ETV Bharat / state

ಬಂಗಾರಪೇಟೆ ತಹಶೀಲ್ದಾರ್ ಕೊಲೆ ಪ್ರಕರಣ: ಎಡಿಜಿಪಿಯಿಂದ ಸ್ಥಳ ಪರಿಶೀಲನೆ - Bangarapette Tehsildar murder casenews

ಬಂಗಾರಪೇಟೆ ತಾಲೂಕಿನ ದೊಡ್ಡಕಳವಂಕಿ ಬಳಿ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಇಂದು ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಿದರು.

ಎಡಿಜಿಪಿಯಿಂದ ಸ್ಥಳ ಪರಿಶೀಲನೆ
ಎಡಿಜಿಪಿಯಿಂದ ಸ್ಥಳ ಪರಿಶೀಲನೆ
author img

By

Published : Jul 10, 2020, 3:53 PM IST

ಕೋಲಾರ : ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಿದರು.

ನಿನ್ನೆ(ಗುರುವಾರ) ಬಂಗಾರಪೇಟೆ ತಾಲೂಕಿನ ದೊಡ್ಡಕಳವಂಕಿ ಬಳಿ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದಿದ್ದರು.

ಎಡಿಜಿಪಿಯಿಂದ ಸ್ಥಳ ಪರಿಶೀಲನೆ
ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಬಂಗಾರಪೇಟೆಯ ದೊಡ್ಡಕಳವಂಕಿ ಗ್ರಾಮದ ನಿವೃತ್ತ ಶಿಕ್ಷಕ ವೆಂಕಟಪತಿ ಎಂಬಾತ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದು, ಈ ಸಂಬಂಧ ಸರ್ವೇ ಮಾಡಲು ಹೋದ ವೇಳೆ ಘಟನೆ ನಡೆದಿತ್ತು. ತಕ್ಷಣ ಅವರನ್ನು ಕಾರಿನಲ್ಲಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಜಾಲಪ್ಪ ಅಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದರು.

ಎಡಿಜಿಪಿ ಅಮರ್ ಕುಮಾರ್ ಪಾಂಡೆ ಜೊತೆಗೆ ಐಜಿ ಕುಮಾರ್ ಸಿಂಗ್, ಎಸ್ಪಿ ಮೊಹಮ್ಮದ್ ಸುಜೀತಾ, ಕಾರ್ತಿಕ್ ರೆಡ್ಡಿ ಸಾಥ್ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.