ಕೋಲಾರ: ಭಾರತೀಯ ಯೋಧರ ಮೇಲೆ ಚೀನಾ ಸೈನಿಕರ ದಾಳಿಯನ್ನು ಖಂಡಿಸಿ, ಚೀನಾಗೆ ತಕ್ಕ ಪ್ರತ್ಯುತ್ತರ ನೀಡಬೇಕೆಂದು ಆಗ್ರಹಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಜರಂಗ ದಳದ ಕಾರ್ಯಕರ್ತರು, ಚೀನಾ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಸಂಘರ್ಷದಲ್ಲಿ, ಭಾರತದ 20 ಯೋಧರು ಹುತಾತ್ಮರಾಗಿದ್ದು, ಭಾರತೀಯ ಯೋಧರ ಮೇಲೆ ಚೀನಾ ಕುಚೋದ್ಯ ದಾಳಿ ನಡೆಸಿದೆ ಎಂದು ಕಾರ್ಯಕರ್ತರು ಖಂಡಿಸಿದರು. ಮಾತ್ರವಲ್ಲ ಹುತಾತ್ಮ ಯೋಧರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.
ಇನ್ನು ಭಾರದದಲ್ಲಿಯೇ ಇದ್ದು ಚೀನಾಗೆ ಬೆಂಬಲ ನೀಡುತ್ತಿರುವವರ ವಿರುದ್ದ ಘೋಷಣೆ ಕೂಗಿದರು. ಅಲ್ಲದೆ ಚೀನಾದ ಭಾವುಟವನ್ನ ಸುಡುವುದರ ಮೂಲಕ ಆಕ್ರೋಶ ಹೊರಹಾಕಿದರು.