ಕೋಲಾರ: ನಗರದ ಟಿ.ಚನ್ನಯ್ಯರಂಗಮಂದಿರದಲ್ಲಿ ಎಸ್‌ಎನ್‌ಆರ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ವತಿಯಿಂದ ರಕ್ತದಾನದ ಮಹತ್ವದ ಬಗ್ಗೆ ಕಾರ್ಯಗಾರವನ್ನ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನ ದೀಪ ಬೆಳಗಿಸುವ ಮೂಲಕ ಜಿಲ್ಲಾ ಆರೋಗ್ಯಾಧಿಕಾರಿ ವಿಜಯ್‌ಕುಮಾರ್ ಹಾಗೂ ಜಿಲ್ಲಾ ಸರ್ಜನ್ ನಾರಾಯಣಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಇದೇ ವೇಳೆ ಪ್ಯಾರಾ ಮೆಡಿಕಲ್‌ನ ನಾಲ್ಕನೇ ತಂಡದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮದಲ್ಲಿ ಮೊಂಬತ್ತಿಯನ್ನು ಹಿಡಿದು ನೂರಾರು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದ್ರು.
ಇನ್ನು ಇದೇ ವೇಳೆ ರಕ್ತದಾನ ಮಹತ್ವದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ರು. ಅಲ್ಲದೆ ಕಾರ್ಯಕ್ರಮದಲ್ಲಿ ನೂರಾರು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಿದ್ದರು.