ಕೋಲಾರ : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದೆ.
ಮಂಗಳೂರು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಇಂದು ಬೆಳಗ್ಗೆ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಅತಿಸೂಕ್ಷ್ಮ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಿದೆ.
ವಿಶೇಷವಾಗಿ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಬಂಗಾರಪೇಟೆ ರೈಲ್ವೇ ನಿಲ್ದಾಣ ಹಾಗೂ ಕೆಜಿಎಫ್ ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಸರ್ಪಗಾವಲಿದ್ದಾರೆ.