ಕೋಲಾರ : ಸೈಕಲ್‌ನಲ್ಲಿ ಬಂದ ಚೋರನೊಬ್ಬ ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನ ಕಿತ್ತುಕೊಂಡು ಪರಾರಿಯಾದ ಘಟನೆ ಮುನೇಶ್ವರ ನಗರದಲ್ಲಿ ಜರುಗಿದೆ.
ಸುಜಾತಮ್ಮ ಎಂಬುವವರ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನ ಕದ್ದು ಪರಾರಿಯಾಗಿದ್ದಾನೆ. ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುವ ಸುಜಾತಮ್ಮ, ಇಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಬಸ್ ನಿಲ್ದಾಣಕ್ಕೆ ಬರುವ ಸಂದರ್ಭದಲ್ಲಿ ಹಿಂದೆಯಿಂದ ಸೈಕಲ್ ನಲ್ಲಿ ಬಂದು 2 ಲಕ್ಷ ಮೌಲ್ಯದ 60 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನ ಕದ್ದು,ಪರಾರಿಯಾಗಿದ್ದಾನೆ.
ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.