ಕೋಲಾರ : ಕೆಜಿಎಫ್ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಲಂಚಾವತಾರ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಪುಷ್ಟಿ ನೀಡುತ್ತಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ಸಾರಿಗೆ ಇಲಾಖೆಯಲ್ಲಿ ನಡೆಯುತ್ತಿರುವ ಹಗಲು ದರೋಡೆ, ಭ್ರಷ್ಟಾಚಾರಕ್ಕೆ ಎಲ್ಲೆ ಇಲ್ಲದಂತಾಗಿದ್ದು, ಇಲ್ಲಿನ ದಲ್ಲಾಳಿಗಳು ಅಮಾಯಕರಿಂದ ಪ್ರತಿನಿತ್ಯ ನೂರಾರು ರೂಪಾಯಿ ಹಣ ಸುಲಿಗೆ ಮಾಡುತ್ತಿದ್ದಾರಂತೆ.
ಎಲ್‌ಎಲ್‌ಅರ್ ಹಾಗೂ ಡಿಎಲ್ ಬೇಕು ಅಂದ್ರೆ ಇಲ್ಲಿರುವ ದಲ್ಲಾಳಿಗಳಿಗೆ ಹಾಗೂ ಅಧಿಕಾರಿಗಳಿಗೆ ಲಂಚ ಕೊಡಲೆಬೇಕು. ಡಿಎಲ್ ಬೇಕು ಅಂದ್ರೆ 500-2000ದವರೆಗೂ ಹಣ ನೀಡಬೇಕು. ಸಾರಿಗೆ ಇಲಾಖೆ ಭ್ರಷ್ಟಾಚಾರ ತಡೆಗಟ್ಟಲು ಡಿಜಿಟಲ್ ವ್ಯವಸ್ಥೆ ಮಾಡಿದ್ದರೂ ಕೂಡ ಪರ್ಯಾಯ ಮಾರ್ಗ ಕಂಡುಕೊಂಡಿರುವ ದಲ್ಲಾಳಿಗಳು ಲಂಚ ಪಡೆಯೋದನ್ನು ಮಾತ್ರ ನಿಲ್ಲಿಸಿಲ್ಲ ಎಂದು ಇಲ್ಲಿನ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಡಿಸಿದ್ದಾರೆ.
ಸಾರಿಗೆ ಇಲಾಖೆ ಲಂಚಾವಾತರದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ಹಲವು ಸಂಘಟನೆಗಳು ಪ್ರತಿಭಟನೆ ಮಾಡಿ ವ್ಯವಸ್ಥೆ ಸರಿಪಡಿಸುವಂತೆ ಒತ್ತಾಯ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲವಂತೆ.