ಕೋಲಾರ: ರಾಜ್ಯ ಸಾರಿಗೆ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿ ಗೇಟ್ ಬಳಿ ನಡೆದಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಎಂಬಿಎಸ್ ಖಾಸಗಿ ಹಾಗೂ ಶ್ರೀನಿವಾಸಪುರ ಡಿಪೋಗೆ ಸೇರಿದ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.