ಕೋಲಾರ: ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದ ಹಲವು ಬಾರ್ಗಳ ಲೈಸನ್ಸ್ ರದ್ದು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ಆದಾಗಿನಿಂದಲೂ ಎಲ್ಲರಿಗಿಂತಲೂ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಕೆಲಸ ಹೆಚ್ಚಾಗಿದೆ. ಅಕ್ರಮ ಮದ್ಯ ಮಾರಾಟದ ವಿರುದ್ಧ ದೂರುಗಳು ಹೆಚ್ಚಾಗಿವೆ. ಈ ಸಂಬಂಧ ಹಲವು ಬಾರ್ಗಳ ಲೈಸನ್ಸ್ ರದ್ದು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಅಧಿಕಾರಿಗಳು ಮದ್ಯದಂಗಡಿ ಸ್ಟಾಕ್ಅನ್ನು ತಪಾಸಣೆ ಮಾಡುತ್ತಿದ್ದಾರೆ. ಸ್ಟಾಕ್ನಲ್ಲಿ ವ್ಯತ್ಯಾಸವಿದ್ದರೆ ಕ್ರಿಮಿನಲ್ ಕೇಸ್ ಹಾಕುವಂತೆ ಸೂಚಿಸಲಾಗಿದೆ. ಮೇ 3ರ ನಂತರ ಹಂತ ಹಂತವಾಗಿ ಆದ್ಯತೆ ಮೇರೆಗೆ ಸಡಿಲಿಕೆ ಮಾಡಲಾಗುತ್ತದೆ. ಲಾಕ್ಡೌನ್ ಸಡಿಲಿಕೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದರು.