ಕೋಲಾರ : ಬಿಗ್‍ಬಾಸ್ ಸೀಸನ್ 7 ಕಾರ್ಯಕ್ರಮದ ಸ್ಪರ್ಧಿಯಾಗಿರುವ ಚೈತ್ರಾ ಕೊಟ್ಟೂರ್ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರಗಿಸಬೇಕೆಂದು ಕೋಲಾರದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಘಟನೆಯವರು ಒತ್ತಾಯಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಘಟನೆ ಅಧ್ಯಕ್ಷ, ಬಿಗ್‍ಬಾಸ್ ಸೀಸನ್ 7 ಕಾರ್ಯಕ್ರಮದ 22 ನೇ ಸಂಚಿಕೆಯಲ್ಲಿ ಅಸ್ಪೃಶ್ಯತೆ ಕುರಿತು ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡಿದ್ದಲ್ಲದೇ ವಿಚಿತ್ರವಾಗಿ ನಕ್ಕಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೆ ಬಹಿರಂಗವಾಗಿ ಅಸ್ಪೃಶ್ಯತೆ ಆಚರಣೆ ಬಗ್ಗೆ ಮಾತನಾಡುವ ಮೂಲಕ ಶೋಷಿತ ಸಮುದಾಯಕ್ಕೆ ಹಾಗೂ ದೇಶ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆಂದು ದೂರಿದ್ರು.