ಕೋಲಾರ : ನಗರಸಭೆ ಸದಸ್ಯರೊಬ್ಬರು ಪೌರ ಕಾರ್ಮಿಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಆರೋಪಿಸಿ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಿದರು.
ನಗರಸಭೆ ಮುಂದೆ ನಗರಸಭೆ ಪೌರ ಕಾರ್ಮಿಕರು ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಅಲ್ಲದೆ ಕೋಲಾರದ ನಗರಸಭೆ ಮುಂದೆ ಬೆಳಗ್ಗೆಯಿಂದ ತಮ್ಮ ಕೆಲಸ ಕಾರ್ಯಗಳನ್ನು ಮಾಡದೆ ಪೌರ ಕಾರ್ಮಿಕರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ. ನಗರದ ವಾರ್ಡ್ ನಂ. 14 ರ ನಗರಸಭೆ ಸದಸ್ಯ ಎಸ್.ಆರ್.ಮುರಳೀಗೌಡ ಎಂಬುವರು, ನಿನ್ನೆ ಪೌರ ಕಾರ್ಮಿಕರನ್ನು ಏಕವಚನದಲ್ಲಿ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಪೌರ ಕಾರ್ಮಿಕರು ಆರೋಪಿಸಿದ್ದಾರೆ.
ಇನ್ನು ದಲಿತ ದೌರ್ಜನ್ಯ ಕಾಯ್ದೆಯಡಿ ನಗರಸಭೆ ಸದಸ್ಯನ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಸದಸ್ಯನ ವಿರುದ್ದ ಕ್ರಮ ಕೈಗೊಳ್ಳುವವರೆಗೂ ಕೆಲಸ ಮಾಡುವುದಿಲ್ಲವೆಂದು ಕಾರ್ಮಿಕರು ಪಟ್ಟು ಹಿಡಿದಿದ್ದು, ಇನ್ನು ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಜಿ.ಮಂಜುನಾಥ್ ಸ್ಥಳಕ್ಕೆ ಆಗಮಿಸಿ ಸದಸ್ಯನ ವಿರುದ್ಧ ಕ್ರಮ ಕೈಗೊಳ್ಳವುದಾಗಿ ಭರವಸೆ ನೀಡಿದರು.
ಇನ್ನು ಪ್ರತಿಭಟನೆಯನ್ನು ವಾಪಸ್ಸು ಪಡೆದು ಪೌರ ಕಾರ್ಮಿಕರು ತಮ್ಮ ಕೆಲಸಕ್ಕೆ ತೆರಳಿದರು.