ETV Bharat / state

ಕೋಲಾರ ಜೆಡಿಎಸ್​ನ ಭದ್ರಕೋಟೆ: ಸಿಎಂ ಇಬ್ರಾಹಿಂ - Etv Bharat Kannada

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ವಿಚಾರಕ್ಕೆ ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರು ಕೆಲವರ ಬಲವಂತದಿಂದಾಗಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ ಎಂದು ಹೇಳಿದರು.

cm-ibrahim
ಸಿಎಂ ಇಬ್ರಾಹಿಂ
author img

By

Published : Jan 16, 2023, 9:02 PM IST

Updated : Jan 19, 2023, 8:37 PM IST

ಕೋಲಾರ ಜೆಡಿಎಸ್​ನ ಭದ್ರಕೋಟೆ: ಸಿಎಂ ಇಬ್ರಾಹಿಂ

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ಖಚಿತವಾಗುತ್ತಿದ್ದಂತೆ ಜೆಡಿಎಸ್ ನಾಯಕರು ಕೋಲಾರಕ್ಕೆ ಲಗ್ಗೆ ಇಟ್ಟಿದ್ದಾರೆ. ಒಕ್ಕಲಿಗ ಹಾಗೂ ಮುಸ್ಲಿಂ ಸಮುದಾಯವನ್ನ ಮನವೋಲಿಸುವ ನಿಟ್ಟಿನಲ್ಲಿ ಇಂದು ಕೋಲಾರದಲ್ಲಿ ಸಾಮೂಹಿಕ ವಿವಾಹ ಹಾಗೂ ಸಂಕ್ರಾಂತಿ ಹಬ್ಬದ ನೆಪದಲ್ಲಿ ಸಂಘಟನೆಗೆ ಜೆಡಿಎಸ್ ಮುಂದಾಗಿದೆ.

ಈ ಕುರಿತು ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋಲಾರ ಜೆಡಿಎಸ್​ನ ಭದ್ರಕೋಟೆ. ಕಳೆದ ಬಾರಿ ಶ್ರೀನಿವಾಸಗೌಡ ಜೆಡಿಎಸ್ ಪಕ್ಷದಿಂದ 80 ಸಾವಿರ ಮತಗಳಿಂದ ಗೆದ್ದಿದ್ದರು. ಈ ಬಾರಿ ಜೆಡಿಎಸ್​​ನಿಂದ ಸ್ಪರ್ಧಿಸುತ್ತಿರುವ ಶ್ರೀನಾಥ್ ಅವರಿಗೆ 70 ಸಾವಿರ ಮತಗಳು ಬರುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನೂ ಸಿದ್ದರಾಮಯ್ಯ ಅವರು ಕೆಲವರ ಬಲವಂತದಿಂದಾಗಿ ಕೋಲಾರಕ್ಕೆ ಬಂದು ನಿಲ್ಲುತ್ತಿದ್ದಾರೆ. ಕೆ.ಎಚ್.ಮುನಿಯಪ್ಪ ಅವರನ್ನು ಸೋಲಿಸಿದವರು ಇವತ್ತು ಕಾಂಗ್ರೆಸ್‌ಗೆ ಮತ ಕೇಳುತ್ತಿದ್ದಾರೆ. ಎಂಎಲ್‌ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಅವರು ಹಣ ಪಡೆದು ಬಿಜೆಪಿಗೆ ಮತ ಹಾಕಿಸಿದರು. ಲೆಹರ್ ಸಿಂಗ್ ಅವರನ್ನು ಗೆಲ್ಲಿಸಿದರು, ಕುಪೇಂದ್ರ ರೆಡ್ಡಿ ಅವರನ್ನು ಸೋಲಿಸಿದರು ಎಂದು ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.

ಕೋಲಾರದಲ್ಲಿ ಕಾಂಗ್ರೆಸ್ ಪಾಲಿಟಿಕ್ಸ್ ನೆಲೆಕಚ್ಚಿದೆ. ಕೆ.ಎಚ್.ಮುನಿಯಪ್ಪ ಅವರು ಸಿದ್ದರಾಮಯ್ಯ ಅವರಿಗೆ ಬೆಂಬಲ ಕೊಡುವರಾ? ಎಂದು ಪ್ರಶ್ನಿಸಿದ ಅವರು ಕೋಲಾರದಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ ಎಂದರು. ಅಲ್ಲದೇ ಇಲ್ಲಿ ಇಡೀ ಕಾಂಗ್ರೆಸ್​ ಪಕ್ಷ ಸೇರಿ ಸಭೆ ಮಾಡಿದಾಗ ಸೇರಿದ ಜನ ಬರಿ 2 ಸಾವಿರ, 7 ಜನ ಶಾಸಕರು ಸೇರಿಕೊಂಡು ಜನರನ್ನು ಸೇರಿಸಲಾಗಿಲ್ಲ ಇದು ಜಿಲ್ಲೆಯಲ್ಲಿ ಕಾಂಗ್ರೆಸ್ ವರ್ಚಸ್ಸು ಕಳೆದುಕೊಂಡಿದೆ ಎಂಬುದನ್ನು ತೊರಿಸುತ್ತದೆ. ಸಿದ್ದರಾಮಯ್ಯ ಅವರು ಬಾದಾಮಿ ಗೆಲ್ಲಲು ನಾನು ಕಾರಣ, ಬಾದಾಮಿ ಚುನಾವಣೆಯಲ್ಲಿ ನಾನು ಹೋಂ ವರ್ಕ್ ಮಾಡಿದ್ದು, ಸಿದ್ದರಾಮಯ್ಯ ಅಲ್ಲ, ನಾನು ಅವರನ್ನು ಗೆಲ್ಲಿಸಿದೆ ಅದಕ್ಕೆ ಅವರ ಸರಿಯಾದ ಉಪಕಾರ ಮಾಡಿದರು ಎಂದು ಟೀಕಾ ಪ್ರಹಾರ ನಡೆಸಿದರು.

ಸಿದ್ದರಾಮಯ್ಯ ಬಲವಂತಾವಗಿ ಕೋಲಾರಕ್ಕೆ ಬರುತ್ತಿದ್ದಾರೆ: ಸಿದ್ದರಾಮಯ್ಯರನ್ನು ಬಲವಂತವಾಗಿ ಕೋಲಾರಕ್ಕೆ ಬರುತ್ತಿದ್ದಾರೆ, ಕೊನೆಗೆ ಹೈಕಮಾಂಡ್ ಮೇಲೆ ಹಾಕುತ್ತಿದ್ದಾರೆ. ಸಿದ್ದರಾಮಯ್ಯರನ್ನು ಸೋಲಿಸಲೆಂದೇ ಕೆಲವರು ಕೋಲಾರಕ್ಕೆ ಕರೆದುಕೊಂಡು ಬರುತ್ತಿದ್ದಾರೆ ಎಂದು ಇದೇ ವೇಳೆ ಹೇಳಿದರು. ಇನ್ನೂ ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕಾರಣಕ್ಕೂ ಶ್ರೀನಾಥ ಅವರ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಸ್ಯಾಂಟ್ರೋ ರವಿ ಪ್ರಕರಣ ಪ್ರತಿಕ್ರಿಯೆ ನೀಡಿ, ಪ್ರಕಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಇಲ್ಲವಾದಲ್ಲಿ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎಂದು ಹೇಳಿದರು. ಸ್ಯಾಂಟ್ರೋ ರವಿ ಪ್ರಕರಣದ ವಿಚಾರಣೆ ಪಾರದರ್ಶಕವಾಗಿರಬೇಕಾದರೆ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ಮಾಡಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೆಚ್​​ಡಿಕೆ ಪ್ರತಿಕ್ರಿಯೆ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಹರಕೆಯ ಕುರಿ ಮಾಡಲಾಗುತ್ತಿದೆ ಎಂದು ಪಂಚರತ್ನ ರಥಾಯಾತ್ರೆ ವೇಳೆ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಕೋಲಾರ ಕ್ಷೇತ್ರದಲ್ಲಿ ಅವರನ್ನು ಚುನಾವಣೆಗೆ ನಿಲ್ಲಿಸುವ ಮೂಲಕ ಅವರ ಪಕ್ಷದವರೇ ಹರಕೆಯ ಕುರಿ ಮಾಡಲು ಹೊರಟಿದ್ದಾರೆ. ಸಿದ್ದರಾಮಯ್ಯಗೆ ಕೋಲಾರದಲ್ಲಿ ಸ್ಪರ್ಧಿಸಲು ಯಾರು ಒತ್ತಡ ಹಾಕಿದ್ದಾರೋ ಗೊತ್ತಿಲ್ಲ.

ಆದರೆ, ಸಿದ್ದರಾಮಯ್ಯರಿಗೆ ಕೋಲಾರ ಕ್ಷೇತ್ರವಂತೂ ಸೇಫ್​ ಅಲ್ಲ. ಒಂದು ವೇಳೆ ಅವರು ಅಲ್ಲೇ ಸ್ಪರ್ಧಿಸಿದರಂತೂ ಹರಕೆಯ ಕುರಿ ಆಗುವುದರಲ್ಲಿ ಸಂಶಯವಿಲ್ಲ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಮತ ಪಡೆಯುವ ಶಕ್ತಿ ಇಲ್ಲ. ಅದಕ್ಕಾಗಿಯೇ ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ಕೋಲಾರದಲ್ಲೇ ನಿಲ್ಲಿಸಲು ಹೊರಟಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ: ಕುಮಾರಸ್ವಾಮಿ

Last Updated : Jan 19, 2023, 8:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.