ಕೋಲಾರ: ಕಾಂಗ್ರೆಸ್ ಹೈಕಮಾಂಡ್‌ಗೆ ಶಕ್ತಿ ಇಲ್ಲದಂತಾಗಿದೆ ಎಂದು ಕೋಲಾರದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ವ್ಯಂಗ್ಯವಾಡಿದರು.
ಇಂದು ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಬಿಜೆಪಿ ಮುಖಂಡ ಹೂಡಿ ವಿಜಯ್‌ಕುಮಾರ್ ಅವರ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ ಕಚೇರಿಯನ್ನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಎಂ ಬಿ ಪಾಟೀಲ್ ಎಂಬ ಮೂರು ಬಣಗಳು ಶುರುವಾಗಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಮುಜುಗರ ತರುವಂತಾಗಿದೆ ಎಂದರು.
ಹೈಕಮಾಂಡ್ ನಿಖರ ನಿರ್ಧಾರ ತೆಗೆದುಕೊಂಡು ಸಮಸ್ಯೆಗಳನ್ನ ಬಗೆಹರಿಸಬೇಕಿತ್ತು. ಆದರೆ, ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವುದೇ ನಾಯಕರ ಒಳ ಜಗಳಕ್ಕೆ ಕಾರಣವಾಗಿದೆ. ಸಚಿವ ಸ್ಥಾನದ ವಿಚಾರವಾಗಿ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವುದು ಬಿಜೆಪಿಯ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಬಿಟ್ಟಿದ್ದು. ನಾನು ಅವರ ನಿರ್ಧಾರಕ್ಕೆ ಬಧ್ಧನಾಗಿರುತ್ತೇನೆ ಎಂದರು.