ETV Bharat / state

ಕಾಂಗ್ರೆಸ್ ಟಿಕೆಟ್: ಎರಡನೇ ಪಟ್ಟಿಯಲ್ಲೂ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಸಸ್ಪೆನ್ಸ್..!

ಈಗಾಗಲೇ ಕಾಂಗ್ರೆಸ್​ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರನ್ನು ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಆದರೆ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದಲೂ ಟಿಕೆಟ್​ ನೀಡುವಂತೆ ಹೈಕಮಾಂಡ್​ಗೆ ಒತ್ತಾಯಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

Former CM Siddaramaiah
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
author img

By

Published : Apr 6, 2023, 12:43 PM IST

Updated : Apr 6, 2023, 1:18 PM IST

ಬೆಂಗಳೂರು: ಕಾಂಗ್ರೆಸ್ ಪಕ್ಷ ಇಂದು ಪ್ರಕಟಿಸಿದ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲೂ ಸಹ ಕೋಲಾರ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್​ ಘೋಷಣೆ ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಹೈಕಮಾಂಡ್ ಮೇಲೆ ತೀವ್ರ ಒತ್ತಡವನ್ನು ಹೇರಿದ್ದಾರೆ. ಈ ಹಿನ್ನೆಲೆ ಸದ್ಯಕ್ಕೆ ಒಮ್ಮತದ ತೀರ್ಮಾನಕ್ಕೆ ಬರಲಾಗದೆ ಕಾಂಗ್ರೆಸ್ ಹೈಕಮಾಂಡ್ ಕೋಲಾರಕ್ಕೆ ಅಭ್ಯರ್ಥಿ ಘೋಷಣೆ ಮಾಡದೆ ಹಾಗೆ ಬಾಕಿ ಉಳಿಸಿಕೊಂಡಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.

ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲು ಸಿದ್ದರಾಮಯ್ಯನವರ ಪ್ರಥಮ ಆಯ್ಕೆಯೇ ಕೋಲಾರ ಕ್ಷೇತ್ರವಾಗಿತ್ತು. ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ಅವರು ಘೋಷಣೆ ಮಾಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಸಮೀಕ್ಷಾ ವರದಿಗಳು ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರುಗಳ ನಡುವಿನ ಒಳಜಗಳಗಳಿಂದ ಸಿದ್ದರಾಮಯ್ಯ ಗೆಲುವು ಕಷ್ಟವೆನ್ನುವ ಆಂತರಿಕ ಮಾಹಿತಿ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರವು ಸಿದ್ದರಾಮಯ್ಯನವರ ಗೆಲುವಿಗೆ ಸುರಕ್ಷಿತವಲ್ಲವೆನ್ನುವ ಈ ಕ್ಷೇತ್ರ ಹೊರತುಪಡಿಸಿ ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲು ಸಲಹೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ತಮ್ಮ ಕುಟುಂಬ ಹಾಗೂ ಹಿತೈಷಿಗಳ ಜೊತೆ ಸಮಾಲೋಚನೆ ನಡೆಸಿ ಕೋಲಾರದ ಬದಲು ವರುಣಾದಲ್ಲಿ ಸ್ಪರ್ಧೆ ಮಾಡುವುದಾಗಿ ಪ್ರಕಟಿಸಿದ್ದರು.

ಸಿದ್ದರಾಮಯ್ಯನವರ ಅಪೇಕ್ಷೆಯಂತೆ ಕಾಂಗ್ರೆಸ್ ಹೈಕಮಾಂಡ್ ಮೊದಲ ಪಟ್ಟಿಯಲ್ಲಿ ವರುಣ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯನವರಿಗೆ ಟಿಕೆಟ್ ಘೋಷಣೆ ಮಾಡಿತ್ತು. ಈ ಬೆಳವಣಿಗೆ ನಂತರ ಸಿದ್ದರಾಮಯ್ಯನವರು ವರುಣ ಕ್ಷೇತ್ರದ ಜೊತೆಗೆ ಕೋಲಾರ ಕ್ಷೇತ್ರದಿಂದಲೂ ತಮಗೆ ಸ್ಪರ್ಧೆ ಮಾಡಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರಿಗೆ ಸ್ಪರ್ಧೆ ಮಾಡಲು ಅವಕಾಶ ನೀಡುವ ಸಂಬಂಧ ಚರ್ಚೆ ನಡೆಸಿದ ಎಐಸಿಸಿಯ ಕೇಂದ್ರ ಚುನಾವಣಾ ಸಮಿತಿ ಯಾವುದೇ ನಿರ್ಧಾರಕ್ಕೆ ಬರಲಾಗದೆ ಎರಡನೇ ಪಟ್ಟಿ ಪ್ರಕಟಣೆ ಸಂದರ್ಭದಲ್ಲಿ ಕೋಲಾರ ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ.

ಕೋಲಾರದಲ್ಲಿ ಸ್ಪರ್ಧೆ ಮಾಡಿದರೆ ಕಾಂಗ್ರೆಸ್ ಪಕ್ಷ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಿದೆ. ಇಲ್ಲವಾದಲ್ಲಿ ಸೋಲು ನಿಶ್ಚಿತ ಹಾಗೂ ಕೋಲಾರದಲ್ಲಿಯೇ ತಮ್ಮ ಸ್ಪರ್ಧೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ 20ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಅನ್ನುವುದು ಸಿದ್ದರಾಮಯ್ಯನವರ ಪ್ರತಿವಾದವಾಗಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸದ್ಯದಲ್ಲಿಯೇ ಎರಡನೇ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಬಾದಾಮಿಗೆ ಅಭ್ಯರ್ಥಿ ಪ್ರಕಟ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಲಿ ಶಾಸಕರಾಗಿ ಪ್ರತಿನಿಧಿಸುತ್ತಿದ್ದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರಕ್ಕೆ ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಬಾದಾಮಿಯಲ್ಲಿ ಪ್ರಮುಖ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ ಬಿ ಚಿಮ್ಮನಕಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಈ ವಿದ್ಯಮಾನದಿಂದ ಸಿದ್ದರಾಮಯ್ಯನವರು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲ್ಲ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​ನಿಂದ​ 42​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ... ಯಾವ ಕ್ಷೇತ್ರಕ್ಕೆ ಯಾರು ನೋಡಿ

Last Updated : Apr 6, 2023, 1:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.