ಕೋಲಾರ: ನಗರದ ದೇವರಾಜ ಅರಸು ಮೆಡಿಕಲ್ ಕಾಲೇಜಿಗೆ ಕೇರಳದಿಂದ ಬಂದಿದ್ದ 27 ವಿದ್ಯಾರ್ಥಿಗಳಿಗೆ ಹಾಗೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ನರ್ಸಿಂಗ್ ತರಗತಿಗಳು ಜನವರಿ 1ರಿಂದ ಆರಂಭವಾಗಿದ್ದು, ಹೊರ ರಾಜ್ಯಗಳಿಂದ ಬಂದವರಿಗೆ ಕೊರೊನಾ ಪರೀಕ್ಷೆ ನಡೆಸುವ ವೇಳೆ 28 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಕಾರಣ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸೇರಿ 400 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ.
ಇನ್ನು, ಸೋಂಕಿತ ವಿದ್ಯಾರ್ಥಿಗಳನ್ನು ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಯಾರೊಬ್ಬರಿಗೂ ರೋಗ ಲಕ್ಷಣಗಳಿಲ್ಲ. ಸದ್ಯ ಸೋಂಕಿತರ ಸಂಪರ್ಕದಲ್ಲಿದ್ದವರ ಶೋಧ ಕಾರ್ಯ ನಡೆಯುತ್ತಿದೆ.