ಕೋಲಾರ: ಜಿಲ್ಲೆಯಲ್ಲಿ ಐದು ಜನರಿಗೆ ಕೊರೊನಾ ಸೋಂಕು ಇರುವುದನ್ನ ಜಿಲ್ಲಾಧಿಕಾರಿ ಸತ್ಯಭಾಮ ಖಚಿತಪಡಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು, ಮೂವರು ಯುವಕರು ಸೇರಿದಂತೆ ಐದು ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲದೆ ಸೋಂಕಿತರೆಲ್ಲರೂ ಆರೋಗ್ಯವಾಗಿದ್ದು, ಸೋಂಕಿತರಲ್ಲಿ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದರು.
ಇನ್ನು ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 24 ಜನರನ್ನ ಕ್ವಾರಂಟೈನ್ ಮಾಡಲಾಗಿದ್ದು, ಈ ನಾಲ್ಕು ಸೋಂಕಿತರ ಗ್ರಾಮಗಳನ್ನ ಕಂಟೇನ್ಮೆಂಟ್ ಝೋನ್ಗೆ ಸೇರ್ಪಡೆ ಮಾಡಲಾಗುವುದು ಎಂದು ಹೇಳಿದರು. ಇನ್ನು ಸೋಂಕಿತರನ್ನ ಕೋಲಾರದ ಜಾಲಪ್ಪ ಅಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂದರು.
ಇನ್ನು ಪಿ. 906 ಸೋಂಕಿತ ಮೇ 8ರಂದು ಸರ್ಕಾರಿ ಬಸ್ನಲ್ಲಿ ತುಮಕೂರು, ಚಿಕ್ಕಬಳ್ಳಾಪುರ ಮೂಲಕ ಕೋಲಾರ ಜಿಲ್ಲೆಗೆ ಆಗಮಿಸಿರುವುದಾಗಿ ಹೇಳಿದ್ರು. ಅಲ್ಲದೆ ಪಿ. 907 ಸೋಂಕಿತ ಲಾಕ್ಡೌನ್ ಸಡಿಲಿಕೆಯಾದ ನಂತರ ಮೇ 7ರಂದು ಬಸ್ನಲ್ಲಿ ಬೆಂಗಳೂರಿನಿಂದ ಬಂದಿರುವುದಾಗಿ ತಿಳಿಸಿದರು.