ಕೋಲಾರ: ರಾಕಿಂಗ್ ಸ್ಟಾರ್ ಯಶ್ ನಟಿಸಿರುವ ಬಹು ನಿರೀಕ್ಷಿತ ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ.
ಕೋಲಾರದ ಕೆಜಿಎಫ್ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಬೃಹತ್ ದುಬಾರಿ ಸೆಟ್ನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಪರಿಸರ ಹಾನಿ ಹಾಗೂ ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಕೆಜಿಎಫ್-2 ಸಿನಿಮಾ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡುವಂತೆ ಶ್ರೀನಿವಾಸ್ ಎಂಬುವವರು ನ್ಯಾಯಾಲಯದ ಮೊರೆ ಹೋಗಿದ್ರು. ಇದೀಗ ಕೆಜಿಎಫ್ ಸಿವಿಲ್ ನ್ಯಾಯಾಲಯ ಶೂಟಿಂಗ್ ಮಾಡದಂತೆ ತಡೆಯಾಜ್ಞೆ ಹೊರಡಿಸಿದೆ.