ಕೋಲಾರ: ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಹೋಬಳಿ ಹಾಗೂ ಸುತ್ತಮುತ್ತಲ ಗಡಿ ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ.
ಇಂದು(ಫೆ.12) ಊಸರಳ್ಳಿ ಗ್ರಾಮದ ಸುತ್ತಮುತ್ತ ಕಾಡಾನೆಗಳ ಹಿಂಡು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಟೊಮೆಟೊ, ಕ್ಯಾರೆಟ್, ಆಲೂಗಡ್ಡೆ ಸೇರಿದಂತೆ ಹಲವಾರು ಬೆಳೆಗಳನ್ನು ತೋಟಕ್ಕೆ ನುಗ್ಗಿ ನಾಶಗೊಳಿಸಿದೆ. ಇದರಿಂದ ಸ್ಥಳೀಯ ರೈತರು ಕಂಗಾಲಾಗಿದ್ದಾರೆ.
ಕಳೆದ ತಿಂಗಳಿನಿಂದಲೂ ನಿರಂತರವಾಗಿ ಆನೆ ದಾಳಿ ನಡೆಯುತ್ತಿದೆ. ಇಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿ ಇತ್ತ ಗಮನ ಹರಿಸುತ್ತಿಲ್ಲ. ಇನ್ನೊಂದು ಕಡೆ ಸರ್ಕಾರದಿಂದ ಯಾವ ಪರಿಹಾರವೂ ಸಿಕ್ಕಿಲ್ಲ ಎಂದು ರೈತರು ಆರೋಪಿಸಿದರು.
ಅರಣ್ಯ ಇಲಾಖೆ ಶೀಘ್ರವೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಬೆಳೆ ಹಾನಿಯಾದವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.