ETV Bharat / state

ದಲಿತ ಬಾಲಕ ದೇವರನ್ನು ಮುಟ್ಟಿದ ಆರೋಪ: ಮೇಲ್ಜಾತಿಯ ಕೆಲವರಿಂದ ಬೆದರಿಕೆ - threatened by upper caste people

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಹುಳ್ಳೇರಹಳ್ಳಿಯಲ್ಲಿ ದಲಿತ ಬಾಲಕನೊಬ್ಬ ದೇವರನ್ನು ಮುಟ್ಟಿದ್ದಕ್ಕೆ, ಆತನ ಕುಟುಂಬಕ್ಕೆ ಮೇಲ್ಜಾತಿಯವರು ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

Dalit boy accused of touching God
ದಲಿತ ಬಾಲಕ ದೇವರನ್ನು ಮುಟ್ಟಿದ ಆರೋಪ
author img

By

Published : Sep 20, 2022, 2:19 PM IST

ಕೋಲಾರ: ಗ್ರಾಮ ದೇವತೆ ಮೆರವಣಿಗೆ ವೇಳೆ ದಲಿತ ಕುಟುಂಬಕ್ಕೆ ಸೇರಿದ ಬಾಲಕನೋರ್ವ ದೇವರನ್ನು ಮುಟ್ಟಿದ್ದಕ್ಕೆ, ಗ್ರಾಮಸ್ಥರು ರಮೇಶ್, ಶೋಭಾ ಹಾಗೂ ಅವರ ಮಗ ಚೇತನ್​​ಗೆೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಹುಳ್ಳೇರಹಳ್ಳಿಯಲ್ಲಿ ಘಟನೆ ಜರುಗಿದೆ. ಚೇತನ್ ಎಂಬ ಬಾಲಕನ ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ ಎನ್ನಲಾಗ್ತಿದೆ.

ಕಳೆದ ಮೂರು ದಿನಗಳ‌ ಹಿಂದೆ ಹುಳ್ಳೇರಹಳ್ಳಿ ಗ್ರಾಮದಲ್ಲಿ ದೇವಾಲಯವೊಂದನ್ನು ಪ್ರತಿಷ್ಟಾಪನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಭೂದೇವಿಯ ಉತ್ಸವ ಮಾಡಲು ಗ್ರಾಮಸ್ಥರು ನಿರ್ಧರಿಸಿದ್ದರು. ಉತ್ಸವದ ವೇಳೆ ದಲಿತ ಕುಟುಂಬಕ್ಕೆ ಸೇರಿದ ಚೇತನ್ ಎಂಬ ಯುವಕ ದೇವರನ್ನು ಮುಟ್ಟಿದ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಆ ಬಾಲಕನ ಕುಟುಂಬಕ್ಕೆ 60 ಸಾವಿರ ರೂ ದಂಡ‌ ಕಟ್ಟುವಂತೆ ಮೇಲ್ಜಾತಿಯ ಕೆಲವರು ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ.

60 ಸಾವಿರ ದಂಡ ಕಟ್ಟಿ ಇಲ್ಲವಾದಲ್ಲಿ ಗ್ರಾಮದಿಂದ ಬಹಿಷ್ಕರಿಸಲಾಗುವುದು ಎಂದು ಗ್ರಾಮದ ಮುಖಂಡರು, ಬಾಲಕನ ತಾಯಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆಂದು ಪೋಷಕರು ಆರೋಪಿಸಿದ್ದಾರೆ. ಕೆಲವರ ಮಾಹಿತಿ ಪ್ರಕಾರ, ಉತ್ಸವ ಮೂರ್ತಿಯನ್ನು ಚೇತನ್ ಎಂಬ ಯುವಕ ಹಾಳು ಮಾಡಿದ ಹಿನ್ನೆಲೆ ಅದನ್ನ ಕಟ್ಟಿಕೊಡುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: ಶೌಚಾಲಯದಲ್ಲಿ ವಿದ್ಯಾರ್ಥಿ ಕೂಡಿ ಬೀಗ ಹಾಕಿದ ಶಿಕ್ಷಕ..18 ಗಂಟೆ ನರಕಯಾತನೆ ಅನುಭವಿಸಿದ ಬಾಲಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.