ETV Bharat / state

ಕೋಲಾರ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ - Vemagal Police Station, Kolar

ಕಾಣೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ವೇಮಗಲ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

dsd
ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
author img

By

Published : Jan 10, 2021, 5:16 PM IST

ಕೋಲಾರ: 15 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕೋಲಾರ ತಾಲೂಕು ದಿನ್ನೆಹೊಸಹಳ್ಳಿ ಗ್ರಾಮದ ನಿರ್ಜನ ಪ್ರದೇಶದ ಬಳಿ ಪತ್ತೆಯಾಗಿದೆ.

ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಸೊಣ್ಣೇನಹಳ್ಳಿಯ ಚಿನ್ನರಾಯಪ್ಪ ಮೃತ ವ್ಯಕ್ತಿ. ಈತ ಕೆಲಸಕ್ಕೆ ಹೋಗಿ ಬರುವೆ ಎಂದು ಹೋದವನು ನಾಪತ್ತೆಯಾಗಿದ್ದ. ಬಂಡೆ ಒಡೆಯುವ ಕೆಲಸ ಮಾಡುತ್ತಿದ್ದ ಈತ ಊರಿನ ಎಲ್ಲರಿಗೂ ಬೇಕಾದ ವ್ಯಕ್ತಿಯಾಗಿದ್ದನಂತೆ. ಈತ ಕಾಣೆಯಾದ ದಿನದಿಂದ ಕುಟುಂಬಸ್ಥರು ಸಾಕಷ್ಟು ಹುಡುಕಾಡಿದರು ಪ್ರಯೋಜವಾಗಿರಲಿಲ್ಲ.

ಈ ಹಿನ್ನೆಲೆ ವೇಮಗಲ್​ ಪೊಲೀಸ್​ ಠಾಣೆಯಲ್ಲಿ ನಾಪತ್ತೆ ಪ್ರಕರಣ ಸಹ ದಾಖಲಿಸಲಾಗಿತ್ತು. ಆದರೆ ಇಂದು ಚಿನ್ನರಾಯಪ್ಪನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತನ ಸಂಬಂಧಿಕರು ಕೊಲೆ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ವೇಮಗಲ್​ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.