ಕೋಲಾರ : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ತಾಲ್ಲೂಕಿನ ನಡುಪಳ್ಳಿಯ ಕೆರೆಯ ಬಳಿ ಪತ್ತೆಯಾಗಿದೆ. ಸುಮಾರು 30 ರಿಂದ 35 ವರ್ಷದ ಅಪರಿಚಿತ ಮಹಿಳೆಯನ್ನು ಯಾರೋ ಕಿಡಿಗೇಡಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಇನ್ನು, ಮೃತ ಮಹಿಳೆಯು ಕೆಂಪು ಬಣ್ಣದ ದಿರಿಸು ಹಾಗೂ ಲೆಗ್ಗಿನ್ಸ್ ಧರಿಸಿದ್ದು, ಕೈಮೇಲೆ ಹಚ್ಚೆ ಇದೆ.
ಈ ಬಗ್ಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದ್ದು, ಮಹಿಳೆ ನಾಪತ್ತೆ ಪ್ರಕರಣ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇನ್ನು, ಸ್ಥಳಕ್ಕೆ ಕೋಲಾರ ಎಸ್ಪಿ ಡಿ.ದೇವರಾಜ್ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಾಲಕಿಗೆ ಅಶ್ಲೀಲ ಚಿತ್ರಗಳ ಮೆಮೊರಿ ಕಾರ್ಡ್ ನೀಡಿದ ಆರೋಪ: ಕಲ್ಲಡ್ಕ ನಿವಾಸಿ ಬಂಧನ