ETV Bharat / state

ಕುಡಿಯುವ ನೀರಿಗಾಗಿ ಆಗ್ರಹಿಸಿ ಗ್ರಾಮ ಪಂಚಾಯತ್‌ ಕಚೇರಿಗೆ ಬೀಗ ಜಡಿದು ಪ್ರತಿಭಟ‌ನೆ..

ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ಗ್ರಾಮಸ್ಥರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿದ್ರೂ ಆ ಮನವಿಗೆ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Protest in Kolar, Demands for drinking water
ಕುಡಿಯುವ ನೀರಿಗಾಗಿ ಆಗ್ರಹ: ಗ್ರಾಮ ಪಂಚಾಯ್ತಿ ಕಛೇರಿಗೆ ಬೀಗ ಜಡಿದು ಪ್ರತಿಭಟ‌ನೆ
author img

By

Published : Apr 8, 2020, 5:39 PM IST

ಕೋಲಾರ : ಕುಡಿಯುವ ನೀರಿಗಾಗಿ ಆಗ್ರಹಿಸಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮ ಪಂಚಾಯತ್‌ಗೆ ಬೀಗ ಜಡಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಕುಡಿಯುವ ನೀರಿಗಾಗಿ ಆಗ್ರಹ.. ಗ್ರಾಮ ಪಂಚಾಯತ್‌ ಕಚೇರಿಗೆ ಬೀಗ ಜಡಿದು ಪ್ರತಿಭಟ‌ನೆ..

ಈ ವೇಳೆ ಗ್ರಾಮಪಂಚಾಯತ್‌ ಅಭಿವೃದ್ಧಿ ಅಧಿಕಾರಿಯನ್ನ ಪಂಚಾಯತ್‌ನಿಂದ ಹೊರಹಾಕಿದ ಗ್ರಾಮಸ್ಥರು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ಗ್ರಾಮಸ್ಥರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿದ್ರೂ ಆ ಮನವಿಗೆ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಿಂದ ಎಚ್ಚೆತ್ತುಕೊಂಡ ಗ್ರಾಮಪಂಚಾಯತ್‌ ಅಧಿಕಾರಿಗಳು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಭರವಸೆ ನೀಡಿದರು. ಬಳಿಕ ಗ್ರಾಮಸ್ಥರು ಪ್ರತಿಭಟನೆಯನ್ನ ಹಿಂತೆಗೆದು ಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.