ETV Bharat / state

ಮಾಲೂರು ಶಾಸಕ ಕೆ.ವೈ.ನಂಜೇಗೌಡ ನಿವಾಸ, ಕಚೇರಿಗಳ ಮೇಲೆ ಇಡಿ ದಾಳಿ - ED attack

ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

ED
ಇಡಿ ದಾಳಿ
author img

By ETV Bharat Karnataka Team

Published : Jan 8, 2024, 9:07 AM IST

Updated : Jan 8, 2024, 10:52 AM IST

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಂಜೇಗೌಡ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ಧಾರೆ. ಕೊಮ್ಮನಹಳ್ಳಿಯಲ್ಲಿರುವ ಇವರ ಮನೆ, ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್ ಕಚೇರಿ ಮತ್ತು ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್​ನಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಆಪ್ತ ಸಹಾಯಕನ ಮನೆ ಮೇಲೂ ದಾಳಿ: ಅಧಿಕಾರಿಗಳು ಏಕಕಾಲದಲ್ಲಿ 10 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ನಂಜೇಗೌಡರ ಆಪ್ತ ಸಹಾಯಕ ಹರೀಶ್​ ಮನೆ ಮೇಲೂ ದಾಳಿ ನಡೆದಿದೆ. ಮಾಲೂರು ತಾಲೂಕಿನ ದೊಡ್ಡಮಲೆ ಗ್ರಾಮದಲ್ಲಿ ಹರೀಶ್ ಮನೆ ಇದ್ದು ಶೋಧ ನಡೆಸುತ್ತಿದ್ದಾರೆ. ಹಾಗೆಯೇ ಕೋಚಿಮುಲ್ ಎಂಡಿ ಗೋಪಾಲ ಮೂರ್ತಿ ಅವರ ನಿವಾಸದ ಮೇಲೆ ಕೂಡ ದಾಳಿ ನಡೆದಿದೆ.

ಇದನ್ನೂ ಓದಿ: ಮಂಗಳೂರು: ಮೂಡಾ ಆಯುಕ್ತರ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರಕರಣ ದಾಖಲು

Last Updated : Jan 8, 2024, 10:52 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.