ಕೋಲಾರ (ಬಂಗಾರಪೇಟೆ): ಕಾಡಾನೆಗಳ ಹಿಂಡು ದಾಳಿ ನಡೆಸಿರುವ ಪರಿಣಾಮ ರೈತನೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಂಗಾರಪೇಟೆ ತಾಲೂಕಿನ ಭತ್ತಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭತ್ತಲಹಳ್ಳಿ ಗ್ರಾಮದ ವೆಂಕಟೇಶಪ್ಪ (53) ಮೃತ ರೈತ. ಕಳೆದ ರಾತ್ರಿ ತೋಟದ ಕಾವಲಿಗೆಂದು ತೆರಳುತ್ತಿದ್ದ ವೆಂಕಟೇಶಪ್ಪನ ಮೇಲೆ ಕಾಡಾನೆಗಳ ಗುಂಪು ದಾಳಿ ನಡೆಸಿದ್ದು, ಆತನ ತಲೆ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.
ಓದಿ: ಹುಬ್ಬಳ್ಳಿ: ಎರಡು ಬೈಕ್ಗಳ ಮಧ್ಯೆ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು
ಕಳೆದ ಮೂರು ತಿಂಗಳಿನಿಂದ ಗಡಿಯಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಕಳೆದ 6 ತಿಂಗಳಲ್ಲಿ ಆನೆ ದಾಳಿಗೆ ಮೂವರು ಬಲಿಯಾಗಿದ್ದಾರೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.