ಕೋಲಾರ: ರಸ್ತೆ ಬದಿಯಲ್ಲಿ ಆನೆ ಮರಿಯೊಂದು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಬಲಮಂದೆ ಗ್ರಾಮದ ಬಳಿ ನಡೆದಿದೆ.
ಕಳೆದ ರಾತ್ರಿ ರಸ್ತೆ ಬದಿಯಲ್ಲಿ ಆನೆ ಮರಿ ಸತ್ತು ಬಿದ್ದಿದ್ದು, ವಾಹನ ಡಿಕ್ಕಿಯಾಗಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.