ಕೋಲಾರ: ಕಳೆದೊಂದು ವಾರದಿಂದ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಆಂದ್ರ ಗಡಿಯ ದಿನ್ನೂರು, ಬೂದಿಕೋಟೆ ಗ್ರಾಮಗಳ ಸುತ್ತಮುತ್ತ ಆನೆಗಳ ಉಪಟಳ ಹೆಚ್ಚಾಗಿದೆ.
ಸುಮಾರು ಹತ್ತಕ್ಕೂ ಹೆಚ್ಚು ಆನೆಗಳ ಹಿಂಡು ರಾಮಕುಪ್ಪಂ ಹಾಗೂ ಕೃಷ್ಣಗಿರಿ ಅರಣ್ಯ ಪ್ರದೇಶದಿಂದ ಬಂದಿದ್ದು, ಕರ್ನಾಟಕದ ಗಡಿ ಭಾಗದ ಜನರ ನಿದ್ದೆಗೆಡಿಸುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯ ಗಡಿಯಲ್ಲಿ ಬೀಡು ಬಿಟ್ಟಿರುವ ಆನೆ ಹಿಂಡು, ನೂರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆಗಳನ್ನು ನಾಶ ಮಾಡಿವೆ.
ಟೊಮ್ಯಾಟೊ, ಪಪ್ಪಾಯ, ಬೀನ್ಸ್, ಭತ್ತ, ತೋಟಗಳಲ್ಲಿನ ಪಂಪು ಸೆಟ್ಗಳಿಗೂ ಹಾನಿ ಮಾಡಿವೆ. ಆನೆಯ ದಾಳಿಯಿಂದ ರೈತರು ಕಂಗಾಲಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಆನೆ ಹಿಂಡು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದ ಹರಸಾಹಸ ಪಡುತ್ತಿದ್ದಾರೆ.