ಕೋಲಾರ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ, ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮಾವಳ್ಳಿ ಗ್ರಾಮದಲ್ಲಿ ನಡೆದಿದೆ.
ಮುಕುಂದಪ್ಪ (55) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಈತ ಹರಟಿ ಗ್ರಾಮೀಣ ಬ್ಯಾಂಕ್ನಲ್ಲಿ 5 ಲಕ್ಷ ರೂ. ಅಲ್ಲದೇ ಕೈ ಸಾಲವನ್ನೂ ಮಾಡಿಕೊಂಡಿದ್ದ. ಹೀಗೆ ಒಟ್ಟು 30 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದೆ.
ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.