ಕೋಲಾರ: ಕೇಂದ್ರ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಆರ್ಸಿಇಪಿ) ಸಹಿ ಹಾಕುವ ನಿರ್ಧಾರವನ್ನು ಖಂಡಿಸಿ ಕೋಲಾರ ತಾಲೂಕು ಹಾಲು ಉತ್ಪಾದಕರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ರು.
ನಗರದ ಕೊಂಡರಾಜನಹಳ್ಳಿಯಿಂದ ರಾಷ್ಟ್ರೀಯ ಹೆದ್ಧಾರಿ-75ರ ಮೂಲಕ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಮಹಿಳೆಯರು, ಮಕ್ಕಳು, ಹಾಗೂ ರೈತರು ಈ ಪ್ರತಿಭಟನೆ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕೇಂದ್ರ ಸರ್ಕಾರದ ನಿರ್ಧಾರದಿಂದ ಲಕ್ಷಾಂತರ ಹೈನೋದ್ಯಮ ನಂಬಿ ಜೀವನ ನಡೆಸುತ್ತಿರುವ ರೈತರು ಬೀದಿ ಪಾಲಾಗಲಿದ್ದಾರೆ. ವಿದೇಶದ ವಸ್ತುಗಳ ಮಾರಾಟಕ್ಕೆ ಹೆಚ್ಚು ಅನುಕೂಲವಾಗಲಿದೆ. ಈ ಕೂಡಲೇ ಒಪ್ಪಂದವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿ ಕಚೇರಿ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.